ಕರ್ನಾಟಕ

karnataka

ETV Bharat / bharat

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.

rajasthan crime
ರಾಜಸ್ಥಾನ ಅಪರಾಧ

By

Published : Jul 23, 2020, 12:02 PM IST

ಬಿಕಾನೇರ್ (ರಾಜಸ್ಥಾನ): ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಕಾನೇರ್ ಜಿಲ್ಲೆಯ ಗಜ್ನೇರ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಥಳೀಯರು ಕೊಟ್ಟ ಮಾಹಿತಿ ನಂತರ ಸ್ಥಳಕ್ಕೆ ಗಜ್ನೇರ್​ ಪೊಲೀಸ್ ಠಾಣೆಯ ಅಧಿಕಾರಿ ಅಮರ್ ಸಿಂಗ್​ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಮುಖ್ಯ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಮರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಮತ್ತೊಂದು ಪ್ರಕರಣ ಶಿವಬಡಿ ಪೊಲೀಸ್​ ಠಾಣಾ ವ್ಯಾಪ್ತಿಯ ಜಯನಾರಾಯಣ ವ್ಯಾಸ್ ಕಾಲೋನಿಯಲ್ಲಿ ನಡೆದಿದೆ. ಮಲಗಿದ್ದ ವೇಳೆ ವ್ಯಕ್ತಿಯೋರ್ವ ತನ್ನ ಪತ್ನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗಳಿಂದ ಮಹಿಳೆ ಮೃತಪಟ್ಟಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿ ಗೋವಿಂದ್ ಚರಣ್ ಪರಿಶೀಲನೆ ನಡೆಸಿದ್ದು,​ ಪರಾರಿಯಾಗಿರುವ ಮೃತಳ ಪತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ABOUT THE AUTHOR

...view details