ಜೈಪುರ: ಅನರ್ಹತೆ ಪ್ರಶ್ನಿಸಿ ಸಚಿನ್ ಪೈಲಟ್ ಮತ್ತು ಇತರ ಕಾಂಗ್ರೆಸ್ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಜೈಪುರ ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.
ರಾಜಸ್ಥಾನ ಶಾಸಕರ ಅನರ್ಹತೆ ವಿಚಾರ: 'ಯಥಾಸ್ಥಿತಿ' ಕಾಪಾಡಿಕೊಳ್ಳಲು ಹೈಕೋರ್ಟ್ ಆದೇಶ - ರಾಜಸ್ಥಾನ ಶಾಸಕರ ಅನರ್ಹತೆ ವಿಚಾರ
ಅನರ್ಹತೆ ಪ್ರಶ್ನಿಸಿ ಸಚಿನ್ ಪೈಲಟ್ ನೇತೃತ್ವದಲ್ಲಿ ರಾಜಸ್ಥಾನದ 18 ಮಂದಿ ಕಾಂಗ್ರೆಸ್ ಶಾಸಕರು ಜೈಪುರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.
ಸಚಿನ್ ಪೈಲಟ್
ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಡಿಸಿಎಂ ಸಚಿನ್ ಪೈಲಟ್ ಸೇರಿ 18 ಮಂದಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭಾ ಸ್ಪೀಕರ್ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಜೈಪುರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಇಂದ್ರಜಿತ್ ಮೊಹಾಂತಿ ಹಾಗೂ ನ್ಯಾ. ಪ್ರಕಾಶ್ ಗುಪ್ತಾ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದ್ದಾರೆ. ಹೀಗಾಗಿ ಸ್ಪೀಕರ್ ಆದೇಶ ಮುಂದುವರೆಯಲಿದೆ.