ಜೈಪುರ್:ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮಾ ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿತು.
ಇದೇ ವೇಳೆ ಗವರ್ನರ್ ಭೇಟಿ ಮಾಡಿದ ಮುಖ್ಯಮಂತ್ರಿ ಬಹುಮತ ಸಾಬೀತು ಮಾಡಲು ತುರ್ತು ಅಧಿವೇಶನ ಕರಿಯುವಂತೆ ಮನವಿ ಮಾಡಿಕೊಂಡರು. ಇದಕ್ಕೂ ಮೊದಲು ಹೋಟೆಲ್ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ರಾಜಭವನಕ್ಕೆ ಆಗಮಿಸಿ, ಹೊರಗಡೆ ಸುಮಾರು 4 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ನಮ್ಮ ಸರ್ಕಾರಕ್ಕೆ ಬಹುಮತವಿದೆ. ಅದಕ್ಕೆ ಗವರ್ನರ್ ಅವಕಾಶ ನೀಡಬೇಕು ಎಂದಿದ್ದಾರೆ. ಅವರ ಮೇಲೆ ಬಿಜೆಪಿ ಒತ್ತಡ ಹಾಕುತ್ತಿರುವ ಕಾರಣ ನಿರ್ಣಯ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಗವರ್ನರ್ ತಕ್ಷಣವೇ ತುರ್ತು ಅಧಿವೇಶನ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.