ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಎಲ್ಲಾ ಸಚಿವರನ್ನು ಶನಿವಾರ ರಾತ್ರಿ ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಸಭೆ ನಡೆಸಲಿದ್ದಾರೆ.
ಇದರ ಬೆನ್ನಲ್ಲೇ ಪಕ್ಷದ ಹೈಕಮಾಂಡ್ ಭೇಟಿ ಮಾಡಲು 25 ಶಾಸಕರನ್ನು ಕರೆದುಕೊಂಡು ಡಿಸಿಎಂ ಸಚಿನ್ ಪೈಲಟ್ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕೈ ಶಾಸಕರಲ್ಲದೇ ಕೆಲವು ಪಕ್ಷೇತರ ಶಾಸಕರು ಕೂಡ ಸರ್ಕಾರಕ್ಕೆ ಬೆಂಬಲ ಸೂಚಿಸಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.