ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಪ್ರಯಾಣ ಬೆಳೆಸಿದ್ದ ಜೆಡಿಎಸ್-ಕಾಂಗ್ರೆಸ್ ಅತೃಪ್ತ ಶಾಸಕರು ಪ್ರಯಾಣಕ್ಕೆ ಬಳಕೆ ಮಾಡಿದ್ದವಿಶೇಷ ವಿಮಾನ, ಬಿಜೆಪಿ ರಾಜ್ಯಸಭಾ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರ ಒಡೆತನದ್ದು ಎಂದು ಸುದ್ದಿ ಬಿತ್ತರಗೊಂಡಿತ್ತು.
ಸಮಸ್ಯೆಗೆ ನನ್ನ ಅಥವಾ ವಿಮಾನ ದೋಷಿಸಬೇಡಿ: ಡಿಸಿಎಂಗೆ ರಾಜೀವ್ ಚಂದ್ರಶೇಖರ್ ತಿರುಗೇಟು
ಅತೃಪ್ತ ಶಾಸಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ ಎಂದು ಟ್ವೀಟ್ ಮಾಡಿದ್ದ ಡಿಸಿಎಂ ಪರಮೇಶ್ವರ್ಗೆ ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಇದೇ ವಿಷಯವನ್ನಿಟ್ಟುಕೊಂಡು ಡಿಸಿಎಂ ಪರಮೇಶ್ವರ್ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದು,ರಾಜ್ಯ ತೀವ್ರ ಬರಗಾಲ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿ ನಡೆಸುತ್ತಿರುವ ಯತ್ನ ನಿಜಕ್ಕೂ ನಾಚಿಕೆಗೇಡಿನ ಕೃತ್ಯ ಎಂದಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ರಾಜೀವ್ ಚಂದ್ರಶೇಖರ್, ಡಿಯರ್ ಪರಮೇಶ್ವರ್, ಈ ಏರ್ಕ್ರಾಫ್ಟ್ ವಾಣಿಜ್ಯ ಉದ್ದೇಶಗಳಿಗಾಗಿ ಬಳಕೆಯಾಗುತ್ತಿದ್ದು, ಈ ಹಿಂದೆಯೂ ನಿಮ್ಮ ಸಚಿವರು ಇದರಲ್ಲಿ ಪ್ರಯಾಣ ಮಾಡಿದ್ದಾರೆ. ನಿಮ್ಮ ಸಮಸ್ಯೆಗೆ ನನ್ನ ಅಥವಾ ವಿಮಾನ ದ್ವೇಷಿಸುವ ಕಾರಣವಿಲ್ಲ. ಇದು ನಿಮ್ಮ ಮೈತ್ರಿಯಿಂದ ಉದ್ಭವವಾಗಿರುವ ಸಮಸ್ಯೆ ಎಂದು ತಿಳಿಸಿದ್ದಾರೆ.