ಚೆನ್ನೈ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ವಿರೋಧಿ ಹಾಗೂ ಪರರ ನಡುವೆ ನಡೆದ ಘರ್ಷಣೆಯಿಂದಾಗಿ 24 ಜನರು ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ನಟ ರಜಿನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಮತ್ತು ದೆಹಲಿ ರಾಜ್ಯ ಸರ್ಕಾರಗಳು ಪ್ರತಿಭಟನೆಯನ್ನು ನಿಗ್ರಹಿಸಬೇಕಿತ್ತು. ಭವಿಷ್ಯದಲ್ಲಿ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಚೆನ್ನೈನ ತಮ್ಮ ಪೋಯಸ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಈ ಘಟನೆಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಸಿಎಎಯಿಂದ ಯಾವುದೇ ರಾಜ್ಯದ ಮುಸ್ಲಿಮರಿಗೆ ತೊಂದರೆಯಾದರೇ ಅದರ ವಿರುದ್ಧ ಮೊದಲು ನಾನೇ ಧ್ವನಿ ಎತ್ತುತ್ತೇನೆ ಎಂದು ಅಭಯ ನೀಡಿದರು.
ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ಮಾತನಾಡಿದ ನಟ ರಜಿನಿಕಾಂತ್ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಪರ ಮತ್ತು ವಿರೋಧದ ಹಿಂಸಾಚಾರ ಮತ್ತು ಗಲಭೆಯಿಂದ ಮೃತಪಟ್ಟವರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಪ್ರಚೋದನಾಕಾರಿ ಭಾಷಣ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿ, ದ್ವೇಷದ ಭಾಷಣ ಮಾಡಿದವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.