ಚೆನ್ನೈ: ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸೂಪರ್‌ಸ್ಟಾರ್ ರಜನಿಕಾಂತ್ ಸ್ವಾಗತಿಸಿದ್ದಾರೆ.
ಇದರೊಂದಿಗೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ಬಾಧಿತ ವ್ಯಕ್ತಿಗಳಿಗೆ ಆರ್ಥಿಕ ನೆರವು ನೀಡುವಂತೆ ತಲೈವಾ ಮನವಿ ಮಾಡಿದ್ದಾರೆ. ಅಲ್ಲದೆ ವೈರಸ್ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಸಹಕಾರ ನೀಡಬೇಕಾಗಿ ಕರೆ ನೀಡಿದ್ದಾರೆ.