ವೆಲ್ಲೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಂದೆಯನ್ನು ವಿಡಿಯೋ ಕಾಲ್ ಮೂಲಕ ಸಂಪರ್ಕಿಸುವಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಅಪರಾಧಿಗಳಲ್ಲಿ ಒಬ್ಬರಾದ ಮುರುಗನ್, ತಮಿಳುನಾಡು ಸಿಎಂಗೆ ಮನವಿ ಮಾಡಿದ್ದಾನೆ.
ಮೂಲಗಳ ಪ್ರಕಾರ, ಮುರುಗನ್ ತಮ್ಮ ತಂದೆಯ ಅನಾರೋಗ್ಯದ ಬಗ್ಗೆ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ತಮ್ಮ ವಕೀಲರ ಮೂಲಕ ಕೋರಿದ್ದಾರೆ. ವಿಡಿಯೋ ಕರೆ ಮೂಲಕ ತಂದೆಯನ್ನು ಸಂಪರ್ಕಿಸಲು ಅವಕಾಶ ನೀಡುವಂತೆ ಅವರು ಸಿಎಂಗೆ ಮನವಿ ಮಾಡಿದ್ದಾನೆ.