ಕರ್ನಾಟಕ

karnataka

ETV Bharat / bharat

ಕಂಟೇನ್ಮೆಂಟ್​ ಪ್ರದೇಶದ ಕಾರ್ಮಿಕರ ವಿಮಾ ಯೋಜನೆಗೆ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ - Rajnath Singh launches insurance scheme

ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ಮಾರ್ಟ್ ಸಿಟೀಸ್ ಮಿಷನ್, ಶಾಲಾ ಮಕ್ಕಳಿಗೆ ಮಧ್ಯಾಹ್ನ ಊಟ ಯೋಜನೆ ಇತ್ಯಾದಿ ಕಲ್ಯಾಣ ಯೋಜನೆಗಳನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಈ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅಂತರಗಳಿಲ್ಲ ಎಂದು ಹೇಳಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

By

Published : Aug 25, 2020, 8:48 PM IST

ನವದೆಹಲಿ: ಇಂದು ದೇಶಾದ್ಯಂತ 62 ಕಂಟೇನ್ಮೆಂಟ್‌ ಪ್ರದೇಶಗಳಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳ (ಸಿಎಸ್‌ಎಸ್) ಅನುಷ್ಠಾನವನ್ನು ಸುಧಾರಿಸಲು ರಕ್ಷಣಾ ಸಚಿವಾಲಯ ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಡಿಫೆನ್ಸ್ ಎಸ್ಟೇಟ್ ವೆಬಿನಾರ್ ಆಯೋಜಿಸಿದೆ. ಇದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಈ ವೆಬಿನಾರ್ ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಅನುಷ್ಠಾನಗೊಳಿಸುವ ಮತ್ತು ಕಂಟೇನ್ಮೆಂಟ್‌ ಪ್ರದೇಶಗಳಲ್ಲಿರುವ ಸುಮಾರು 21 ಲಕ್ಷ ನಿವಾಸಿಗಳ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ಮಾರ್ಟ್ ಸಿಟೀಸ್ ಮಿಷನ್, ಶಾಲಾ ಮಕ್ಕಳಿಗೆ ಮಧ್ಯಾಹ್ನ ಊಟ ಯೋಜನೆ ಇತ್ಯಾದಿ ಕಲ್ಯಾಣ ಯೋಜನೆಗಳನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಈ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅಂತರಗಳಿಲ್ಲ ಎಂದು ಹೇಳಿದರು.

ಎಲ್ಲಾ 62 ಕಂಟೇನ್ಮೆಂಟ್ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒಗಳು) ಎರಡು ದಿನಗಳ ವೆಬಿನಾರ್‌ನಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನ, ಕಾರ್ಯ ವಿಧಾನ ಮತ್ತು ಧನ ಸಹಾಯದ ಬಗ್ಗೆ ಉತ್ತಮ ತಿಳುವಳಿಕೆ ಮತ್ತು ಕಂಟೇನ್ಮೆಂಟ್ ಪ್ರದೇಶಗಳ ನಿವಾಸಿಗಳಿಗೆ ಇವುಗಳ ಪ್ರಯೋಜನಗಳನ್ನು ವಿಸ್ತರಿಸಲು ಮಾರ್ಗಸೂಚಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಇದನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ವೆಬಿನಾರ್‌ನಲ್ಲಿ ವಸತಿ ಮತ್ತು ನಗರ ವ್ಯವಹಾರಗಳು, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಜಂಟಿ ಕಾರ್ಯದರ್ಶಿಗಳು/ನೋಡಲ್ ಅಧಿಕಾರಿಗಳು ಭಾಗವಹಿಸಿದ್ದಾರೆ. ಸಂಬಂಧಿತ ರಾಜ್ಯ ಇಲಾಖೆಗಳಲ್ಲಿ ಅನುಗುಣವಾದ ರಾಜ್ಯ ಮಿಷನ್ ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಹ ವೆಬಿನಾರ್​ನಲ್ಲಿ ಭಾಗವಹಿಸಿದ್ದಾರೆ.

ಇದೇ ವೇಳೆ ಸಚಿವ ರಾಜನಾಥ್ ಸಿಂಗ್ ‘ಚಾವ್ನಿ ಕೋವಿಡ್: ಯೋಧಾ ಸಂರಕ್ಷಣ ಯೋಜನಾ’ಗೆ ಚಾಲನೆ ನೀಡಿದರು. ಇದು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (ಎಲ್ಐಸಿ) ಮೂಲಕ ನೀಡಲಾಗುವ ಜೀವ ವಿಮಾ ಯೋಜನೆಯಾಗಿದೆ. ಇದು ಎಲ್ಲಾ 62 ಕಂಟೇನ್ಮೆಂಟ್ ಬೋರ್ಡ್‌ಗಳಲ್ಲಿ ಕಾರ್ಯ ನಿರ್ವಹಿಸುವ 10,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಒಳಗೊಳ್ಳುತ್ತದೆ. ಯಾವುದೇ ಮಾರಣಾಂತಿಕ ವಿಪತ್ತು ಸಂಭವಿಸಿದಲ್ಲಿ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಈ ಯೋಜನೆಯು ವೈದ್ಯರು, ಅರೆವೈದ್ಯರು ಮತ್ತು ನೈರ್ಮಲ್ಯ ಸಿಬ್ಬಂದಿ ಸೇರಿದಂತೆ ಖಾಯಂ ಮತ್ತು ಗುತ್ತಿಗೆ ನೌಕರರಿಗೆ ಪ್ರಯೋಜನವನ್ನು ನೀಡುತ್ತದೆ.

ABOUT THE AUTHOR

...view details