ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸಂಸದ ಅಮರ್ ಸಿಂಗ್ ತಮ್ಮ 64ನೇ ವಯಸ್ಸಿನಲ್ಲಿ ನಿಧನರಾದರು. ಸಿಂಗಪುರದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
2013ರಲ್ಲಿ ಕಿಡ್ನಿ ಸಮಸ್ಯೆಯಿಂದ ದುಬೈ ಆಸ್ಪತ್ರೆಗೆ ಇವರು ದಾಖಲಾಗಿದ್ದರು. ತದನಂತರ 2016ರಲ್ಲಿ ರಾಜಕೀಯಕ್ಕೆ ಮರಳಿ ಬಂದಿದ್ದ ಸಿಂಗ್, ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದರು.