ಜೈಪುರ್:ರಾಜ್ಯಸಭೆಯ ಖಾಲಿ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಮೂರು ದಿನಗಳು ಬಾಕಿರುವಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಇತರೆ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಮುಂದುವರೆದಿದೆ. ಕೆಲವೆಡೆ ಕುದುರೆ ವ್ಯಾಪಾರದ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದ ಬೆನ್ನಲ್ಲೇ ರಾಜಸ್ಥಾನದ ಬಿಜೆಪಿ ಶಾಸಕರನ್ನು ಕಾರ್ಯಾಗಾರಕ್ಕಾಗಿ ಹೋಟೆಲ್ಗೆ ಶಿಫ್ಟ್ ಮಾಡುವುದಾಗಿ ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೂನ್ 19 ರಂದು ರಾಜ್ಯಸಭೆಗೆ ಖಾಲಿ ಇರುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನದ ಕುರಿತು ಶಾಸಕರಿಗೆ ಎರಡು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಬಿಜೆಪಿ ಶಾಸಕರನ್ನು ಹೋಟೆಲ್ಗೆ ಸ್ಥಳಾಂತರಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.