ಕರ್ನಾಟಕ

karnataka

ETV Bharat / bharat

ಕೇಂದ್ರ ಸರ್ಕಾರ ವಿರೊಧ ಪಕ್ಷಗಳನ್ನು ಮಾರ್ಗೆಟ್ ಮಾಡಿದೆ.. ಕೈ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ ಆರೋಪ.. - randeep singh surjewala

ಕೇಂದ್ರ ಸರ್ಕಾರವು ವಿರೋಧ ಪಕ್ಷದ ವಿರುದ್ಧ ತನ್ನ ಕೈಗೊಂಬೆಯಂತಿರುವ ತನಿಖಾ ಏಜೆನ್ಸಿಗಳನ್ನು ಬಳಸುತ್ತಿದೆ. ಸರ್ಕಾರದ ಈ ನಡೆಯನ್ನು ನಾವು ಖಂಡಿಸುತ್ತೇವೆ ಎಂದು ಎಐಸಿಸಿ ಸಂವಹನ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ ಹೇಳಿದ್ದಾರೆ.

sur

By

Published : Aug 31, 2019, 11:09 PM IST

ನವದೆಹಲಿ: ಸರ್ಕಾರವು ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ವಿರೋಧ ಪಕ್ಷದ ನಾಯಕರನ್ನು ನಿರಂತರವಾಗಿ ಗುರಿಯಾಗಿಸಿ ಕಿರುಕುಳ ನೀಡುತ್ತಿದೆ.

ಕಳೆದ ಐದು ವರ್ಷಗಳಿಂದ ಮೋದಿ ಸರ್ಕಾರವು ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳು ಪ್ರಕರಣ ರೂಪಿಸುವ ಮೂಲಕ ಗುರಿಯಾಗಿಸಿದೆ ಎಂದು ಎಐಸಿಸಿ ಸಂವಹನ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.ಡಿ ಕೆ ಶಿವಕುಮಾರ್ ಅವರು ತನಿಖೆಗೆ ಸಹಕರಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಕಾಂಗ್ರೆಸ್​ ನಾಯಕ ಡಿಕೆಶಿ ಅವರ ವಿರುದ್ಧ ನಡೆಸುತ್ತಿರುವ ಕಾನೂನುಬಾಹಿರ ತಂತ್ರಗಳನ್ನು ನಾವು ಖಂಡಿಸುತ್ತೇವೆ. ತನ್ನ ಕೈಗೊಂಬೆಯಂತಿರುವ ತನಿಖಾ ಏಜನ್ಸಿಗಳನ್ನು ಕೇಂದ್ರ ಸರ್ಕಾರ ವಿರೋಧ ಪಕ್ಷದ ವಿರುದ್ಧ ಬಳಸಿಕೊಳ್ಳುತ್ತಿದೆ ಎಂದು ಸುರ್ಜೇವಾಲಾ ಕಿಡಿ ಕಾರಿದರು.

ABOUT THE AUTHOR

...view details