ಕರ್ನಾಟಕ

karnataka

ETV Bharat / bharat

ಅತ್ಯಾಚಾರಕ್ಕೊಳಗಾದ ಯುವತಿ ತಂದೆಯನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿ! - ಫಿರೋಜಾಬಾದ್​ ರೇಪ್​ ಕೇಸ್​

ಅತ್ಯಾಚಾರಕ್ಕೊಳಗಾಗಿದ್ದ ಯುವತಿ ತಂದೆಯನ್ನ ಆರೋಪಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್​​ನಲ್ಲಿ ನಡೆದಿದೆ.

rape-victims-father-shot-dead-in-up
rape-victims-father-shot-dead-in-up

By

Published : Feb 12, 2020, 12:08 PM IST

ಫಿರೋಜಾಬಾದ್​​:ಕಳೆದ ಆರು ತಿಂಗಳ ಹಿಂದೆ ಯುವತಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ಇದೀಗ ಆಕೆಯ ತಂದೆಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್​​ನಲ್ಲಿ ನಡೆದಿದೆ.

ಕಳೆದ ಆರು ತಿಂಗಳ ಹಿಂದೆ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿ ತಲೆಮರೆಸಿಕೊಂಡು ಜೀವನ ನಡೆಸುತ್ತಿದ್ದನು. ಇದೀಗ ನಿನ್ನೆ ರಾತ್ರಿ ದಿಢೀರ್​ ಆಗಿ ಮಹಿಳೆ ಮನೆಗೆ ನುಗ್ಗಿ ಗುಂಡಿಕ್ಕಿ ಆಕೆಯ ತಂದೆಯನ್ನ ಕೊಲೆ ಮಾಡಿದ್ದಾನೆ. ಮೃತ ವ್ಯಕ್ತಿಯನ್ನ ರಾಜೀವ್​ ಕುಮಾರ್​ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲು ಮಾಡಲಾಗಿದೆ.

ಅತ್ಯಾಚಾರವೆಸಗಿದ್ದ ವ್ಯಕ್ತಿ ಬಗ್ಗೆ ಮಾಹಿತಿ ನೀಡಿದವರಿಗೆ 15,000 ರೂ ನಗದು ಹಣ ನೀಡಲಾಗುವುದು ಎಂದು ಈ ಹಿಂದೆ ಆಗ್ರಾ ಪೊಲೀಸ್​ ಇನ್ಸ್​ಪೆಕ್ಟರ್​​​​ ಸತೀಶ್​ ಮಾಹಿತಿ ನೀಡಿದ್ದರು. ಆದರೆ, ಇದೀಗ ಅದನ್ನ 50,000 ರೂ.ಗೆ ಏರಿಕೆ ಮಾಡಲಾಗಿದೆ. ಕಳೆದ ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದರೂ ಇಲ್ಲಿಯವರೆಗೆ ಅಪರಾಧಿ ಕುಟುಂಬದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ದೂರೂ ಕೇಳಿ ಬಂದಿದೆ.

ABOUT THE AUTHOR

...view details