ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ಗೂ ಕೊರೊನಾ ಸೋಂಕು - Shaktikanta Das tests positive for corona
ತಮಗೆ ಕೋವಿಡ್ ತಗುಲಿದ್ದು, ಮನೆಯಲ್ಲೇ ಐಸೋಲೇಷನ್ಗೆ ಒಳಗಾಗಿ ನನ್ನ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತೇನೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಟ್ವೀಟ್ ಮಾಡಿದ್ದಾರೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ಗೂ ಕೊರೊನಾ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಯಾವುದೇ ರೋಗದ ಲಕ್ಷಣಗಳಿಲ್ಲ, ನಾನು ಹುಷಾರಾಗಿದ್ದೇನೆ. ಮನೆಯಲ್ಲೇ ಐಸೋಲೇಷನ್ಗೆ ಒಳಗಾಗಿ ನನ್ನ ಕೆಸಲ, ಕಾರ್ಯ ಮುಂದುವರೆಸುತ್ತೇನೆ " ಎಂದು ತಿಳಿಸಿದ್ದಾರೆ.
ಆರ್‌ಬಿಐನಲ್ಲಿ ಕೆಲಸಗಳು ಎಂದಿನಂತೆ ನಡೆಯಲಿವೆ. ನಾನು ದೂರವಾಣಿ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಡೆಪ್ಯುಟಿ ಗವರ್ನರ್ಗಳು, ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತೇನೆ. ಕಳೆದ ಕೆಲ ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಜಾಗರೂಕರಾಗಿರಿ ಎಂದು ಶಕ್ತಿಕಾಂತ ದಾಸ್ ಟ್ವೀಟ್ ಮಾಡಿದ್ದಾರೆ.