ನವದೆಹಲಿ:ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ರಾಜನ್ ಬಾಬು ಆಸ್ಪತ್ರೆಯಲ್ಲಿ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ, ಲ್ಯಾಬ್ ತಂತ್ರಜ್ಞರು ಹಾಗೂ ಇತರ ನೌಕರರು ನಿತ್ಯ ಒಂದು ಗಂಟೆ ಸಾಂಕೇತಿಕ ಮುಷ್ಕರ ನಡೆಸುತ್ತಿದ್ದಾರೆ.
ಕಳೆದ ಹಲವಾರು ದಿನಗಳಿಂದ ಆಸ್ಪತ್ರೆಯೊಳಗೆ ನಿರಂತರವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಆದರೂ ಇದಕ್ಕೆ ಆಡಳಿತ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಈ ಆಸ್ಪತ್ರೆ ಉತ್ತರ ದೆಹಲಿ ಮಹಾನಗರ ಪಾಲಿಕೆಯ ಅಡಿಯಲ್ಲಿದ್ದು, ಕೊರೊನಾ ರೋಗಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.