ಕರ್ನಾಟಕ

karnataka

ETV Bharat / bharat

ಬಿಹಾರದಲ್ಲಿ ಮೋದಿ 'ಆತ್ಮಚರಿತ್ರೆ' ಮರು ಬಿಡುಗಡೆ: ನೀತಿ ಸಂಹಿತೆ ಉಲ್ಲಂಘನೆ ಆಗಲ್ಲವೆಂದ ಚುನಾವಣಾ ಆಯೋಗ - ಚುನಾವಣಾ ಆಯೋಗ

ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರ ಬಯೋಪಿಕ್ ಮರು ಬಿಡುಗಡೆ ಆಗಿದೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Election Commission
ಚುನಾವಣಾ ಆಯೋಗ

By

Published : Nov 1, 2020, 7:22 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಯೋಪಿಕ್ ಮರು ಬಿಡುಗಡೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಯೋಪಿಕ್ ಬಿಡುಗಡೆಯಾಗಿದೆ. ಈ ಮೂಲಕ ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಮೋದಿಯವರ ಬಯೋಪಿಕ್ ಮರು ಬಿಡುಗಡೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ತಿಳಿಸಿದೆ. ಬಯೋಪಿಕ್ ಈಗಾಗಲೇ ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾಗಿತ್ತು ಎಂದು ಅ ಆಯೋಗ ತಿಳಿಸಿದೆ.

ಅಕ್ಟೋಬರ್ 15 ರಂದು ಚಿತ್ರ ಬಿಡುಗಡೆಯಾಗಿದ್ದು, ಸೆಪ್ಟೆಂಬರ್ 25 ರಂದು ಘೋಷಿಸಿದ ಬಿಹಾರ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಕಳೆದ ವರ್ಷ ಏಪ್ರಿಲ್ 10 ರಂದು ಲೋಕಸಭಾ ಚುನಾವಣೆ ಮುಗಿಯುವವರೆಗೂ, ಚುನಾವಣಾ ಆಯೋಗ ಚಿತ್ರದ ಪ್ರದರ್ಶನವನ್ನು ನಿಷೇಧಿಸಿತ್ತು. ಅಲ್ಲದೆ ಒಟಿಟಿ ವೇದಿಕೆಯಲ್ಲೂ ಮೋದಿಯವರ ವೆಬ್ ಸರಣಿಯನ್ನೂ ನಿರ್ಬಂಧಿಸಿತ್ತು.

ABOUT THE AUTHOR

...view details