ನಿಜಾಮಬಾದ್(ತೆಲಂಗಾಣ):ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಭಿಯಾನದ ಯಶಸ್ಸಿನ ನಂತರ ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಯಾಗಬೇಕು, ಇಬ್ಬರು ಮಕ್ಕಳನ್ನ ಹೊಂದುವ ಕಾನೂನು ತರಬೇಕು ಎಂದು ಹೇಳಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಎಐಎಂಐಎಂ ನಾಯಕ ಅಸದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.
ದೇಶದಲ್ಲಿರುವ ನಿಜವಾದ ಸಮಸ್ಯೆ ನಿರುದ್ಯೋಗ, ಜನಸಂಖ್ಯೆ ಅಲ್ಲ ಎಂದಿದ್ದಾರೆ. ತೆಲಂಗಾಣದ ನಿಜಾಮಾಬಾದ್ನಲ್ಲಿ ಮಾತನಾಡಿರುವ ಅವರು, ನಿಮಗೆ ನಾಚಿಕೆ ಆಗಬೇಕು. ನನಗೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದಾರೆ. ಅನೇಕ ಬಿಜೆಪಿ ನಾಯಕರಿಗೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದಾರೆ. ಆರ್ಎಸ್ಎಸ್ಗೆ ಮುಸ್ಲಿಂ ಸಮುದಾಯದ ಜನಸಂಖ್ಯೆ ನಿಯಂತ್ರಿಸಬೇಕು ಎಂಬ ಉದ್ದೇಶವಿದೆ ಎಂದಿದ್ದಾರೆ.