ನವದೆಹಲಿ:ಕೃಷಿ ಕಾನೂನು ವಿರೋಧಿಸಿ ದೆಹಲಿಯಲ್ಲಿ ಜನವರಿ 26ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 84 ಜನರನ್ನು ಬಂಧಿಸಲಾಗಿದ್ದು, 38 ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟನೆ ಸಂಬಂಧ 1,700 ಮೊಬೈಲ್ ಕ್ಲಿಪ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಾರ್ವಜನಿಕರಿಂದ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರ ಅಪರಾಧ ವಿಭಾಗ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡ ಶನಿವಾರ ಕೆಂಪು ಕೋಟೆ ಪ್ರದೇಶವನ್ನು ಪರಿಶೀಲಿಸಿದೆ. ಹಿಂಸಾಚಾರದಲ್ಲಿ ಭಾಗಿಯಾಗಿರಬಹುದೆಂದು ಶಂಕಿಸಲಾದ ಇಬ್ಬರನ್ನು ಹುಡುಕಲು ದೆಹಲಿ ಪೊಲೀಸರ ತಂಡ ಜಲಂಧರ್‌ಗೆ ತೆರಳಿದೆ.