ಕರ್ನಾಟಕ

karnataka

ETV Bharat / bharat

ಜನಾದೇಶಕ್ಕೆ ಗೌರವ ನೀಡುತ್ತೇವೆ ಎಂದ ಶಾ... ಹೇಮಂತ್​ ಸೊರೇನ್​ಗೆ ಅಭಿನಂದನೆ ಸಲ್ಲಿಸಿದ ನಮೋ! - ಪ್ರಧಾನಿ ನರೇಂದ್ರ ಮೋದಿ

ಜಾರ್ಖಂಡ್​​ ಸೋಲಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಟ್ವೀಟ್​ ಮಾಡಿದ್ದಾರೆ.

Jharkhand result
ಹೇಮಂತ್​ ಸೊರೇನ್​ಗೆ ಅಭಿನಂದನೆ ಸಲ್ಲಿಸಿದ ನಮೋ

By

Published : Dec 23, 2019, 7:18 PM IST

ನವದೆಹಲಿ: ಜಾರ್ಖಂಡ್​ ವಿಧಾನಸಭೆ ಫಲಿತಾಂಶ ಇಂದು ಬಹಿರಂಗಗೊಂಡಿದ್ದು, ಆಡಳಿತರೂಢ ಪಕ್ಷ ಭಾರತೀಯ ಜನತಾ ಪಾರ್ಟಿ ಹೀನಾಯ ಸೋಲು ಕಾಣುವ ಮೂಲಕ ಮುಖಭಂಗಕ್ಕೊಳಗಾಗಿದೆ.

ಜಾರ್ಖಂಡ್​​ನಲ್ಲಿ ಬಿಜೆಪಿ ಸೋಲು ಕಾಣುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಜೆಎಂಎಂ ಮುಖ್ಯಸ್ಥ ಹೇಮಂತ್​ ಸೊರೇನ್​ ಹಾಗೂ ಮೈತ್ರಿ ಕೂಟಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು. ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿರುವ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಟ್ವೀಟ್​ ಮಾಡಿದ್ದು, ರಾಜ್ಯದ ಜನರು ನೀಡಿರುವ ಜನಾದೇಶಕ್ಕೆ ನಾವು ಗೌರವ ನೀಡುತ್ತೇವೆ. ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲು ಜನರು 5 ವರ್ಷಗಳ ಕಾಲ ನಮಗೆ ನೀಡಿದ್ದಕ್ಕೆ ನಾವು ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇವೆ. ಜಾರ್ಖಂಡ್​​ ಅಭಿವೃದ್ಧಿಗಾಗಿ ನಾವು ಸದಾ ಸಿದ್ಧರಿದ್ದೇವೆ ಎಂದು ಬರೆದುಕೊಂಡಿದ್ದು, ಬಿಜೆಪಿಯ ಎಲ್ಲ ಕಾರ್ಯಕರ್ತರು ಹಾಗೂ ಪಕ್ಷಕ್ಕಾಗಿ ದುಡಿದವರಿಗೆ ಅಭಿನಂದನೆ ಎಂದು ತಿಳಿಸಿದ್ದಾರೆ.

81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ದರೆ, ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್​​, ಆರ್​ಜೆಡಿ ಹಾಗೂ ಜೆಎಂಎಂ ಬರೋಬ್ಬರಿ 47 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ.

ABOUT THE AUTHOR

...view details