ತಿರುವನಂತಪುರಂ: ವಾರ್ಷಿಕ ಮಂಡಲ ಪೂಜೆ ಮಹೋತ್ಸವ ಮತ್ತು ಮಕರವಿಳಕ್ಕು ಉತ್ಸವ ಅವಧಿಯಲ್ಲಿ ಕೇರಳದ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆಯನ್ನು ದಿನಕ್ಕೆ ಗರಿಷ್ಠ ಸಾವಿರಕ್ಕೆ ಸೀಮಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ರಚಿಸಿದ ತಜ್ಞರ ಸಮಿತಿ ಶಿಫಾರಸು ಮಾಡಿದೆ.
ಕೋವಿಡ್- 19 ರ ನಡುವೆಯೂ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಯಾತ್ರಿಕರಿಗೆ ಅವಕಾಶ ಕುರಿತ ಮಾನದಂಡಗಳನ್ನು ಮೌಲ್ಯಮಾಪನ ಮಾಡಲು ಮತ್ತು ನಿಗದಿಪಡಿಸಲು ರಾಜ್ಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯ ಆರೋಗ್ಯ, ಮತ್ತು ಗೃಹ ವ್ಯವಹಾರ ಸಚಿವ , ದೇವಸ್ವಂ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಸಮಿತಿಯು ತನ್ನ ವರದಿ ಸಿದ್ಧ ಪಡಿಸಿದ್ದು, ಇದರಲ್ಲಿ ಶಬರಿಮಲೆಗೆ ಬರುವ ಯಾತ್ರಿಗಳು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಸೂಚಿಸಿದೆ. ಶಬರಿಮಲೆ ಬೆಟ್ಟ ಹತ್ತಲು ಅನುಮತಿ ನೀಡುವ ಮುಂಚೆಯೇ ಕೋವಿಡ್ ವರದಿ ಪರಿಶೀಲಿಸಲು ಶಿಫಾರಸು ಮಾಡಿದೆ. ಈ ವರದಿಯನ್ನು ಶೀಘ್ರದಲ್ಲೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಸಮಿತಿ ಹಸ್ತಾಂತರಿಸಲಿದೆ.