ಮುಂಬೈ: ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಡ್ರಗ್ಸ್ ಲಿಂಕ್ ಆರೋಪದಡಿ ನ್ಯಾಯಾಂಗ ಬಂಧನ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋವಿಕ್ ಚಕ್ರವರ್ತಿಗೆ ಮತ್ತಷ್ಟು ಸಂಕಷ್ಟ ಎದುರಿಗಾಗಿದೆ. ಇಬ್ಬರಿಗೂ ಅಕ್ಟೋಬರ್ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಎನ್ಡಿಪಿಎಸ್ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಸುಶಾಂತ್ ಸಿಂಗ್ ಕೇಸ್: ರಿಯಾ ಚಕ್ರವರ್ತಿ, ಶೋವಿಕ್ಗೆ ಅ.20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ - ರಿಯಾ ಚಕ್ರವರ್ತಿ, ಶೋವಿಕ್ಗೆ ನ್ಯಾಯಾಂಗ ಬಂಧನ ವಿಸ್ತರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೋವಿಕ್ ಚಕ್ರವರ್ತಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅಕ್ಟೋಬರ್ 20ರವರೆಗೆ ಇವರಿಬ್ಬರಿಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.
ಅ.20 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಈ ಇಬ್ಬರ ಜಾಮೀನು ಅರ್ಜಿಯ ಆದೇಶವನ್ನು ಬಾಂಬೆ ಹೈಕೋರ್ಟ್ ಕಾದಿರಿಸಿದ್ದು, ಯಾವುದೇ ಕ್ಷಣದಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ಆರೋಪಿಗಳನ್ನು ಎನ್ಡಿಪಿಎಸ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.