ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಾಗಿದ್ದು, ಇದಾದ ಬಳಿಕ ಅವರು ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು.
ಕಳೆದ ಕೆಲ ದಿನಗಳ ಹಿಂದೆ ಸುಶಾಂತ್ ತಂದೆ ಪಾಟ್ನಾದ ಪೊಲೀಸ್ ಠಾಣೆಯಲ್ಲಿ ರಿಯಾ ವಿರುದ್ಧ ದೂರು ದಾಖಲಿಸಿದ್ದರು. ಇದರ ಜತೆಗೆ ತಮ್ಮ ಮಗ ಆತ್ಮಹತ್ಯೆ ಮಾಡಿಕೊಳ್ಳಲು ನಟಿ ನೇರ ಹೊಣೆ ಎಂದು ಆರೋಪಿಸಿದ್ದರು. ಬಳಿಕ ಪೊಲೀಸರು ರಿಯಾ ನಿವಾಸಕ್ಕೆ ತೆರಳಿದ್ದು ಈ ಸಂದರ್ಭದಲ್ಲಿ ಅವರು ಮನೆಯಲ್ಲಿ ಇರಲಿಲ್ಲ ಎಂಬ ಮಾಹಿತಿ ಸಹ ಲಭ್ಯವಾಗಿತ್ತು. ಇದರ ಮಧ್ಯೆ ಏಕಾಏಕಿ ಪ್ರತ್ಯಕ್ಷವಾಗಿರುವ ರಿಯಾ ಇದೀಗ ವಿಡಿಯೋ ಹರಿಬಿಟ್ಟಿದ್ದಾರೆ.