ನವದೆಹಲಿ:ಭಾರತ ಚೀನಾ ವಾಸ್ತವ ಗಡಿರೇಖೆ (ಎಲ್‌ಎಸಿ)ಯಲ್ಲಿ ನಡೆದಿದ್ದ ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡಿದ್ದ ಯೋಧನ ತಂದೆಯೊಬ್ಬರ ವಿಡಿಯೋ ಸಂಬಂಧ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
'ಕ್ಷುಲ್ಲಕ ರಾಜಕಾರಣದ ಬದಲು ರಾಹುಲ್ ಗಾಂಧಿ ದೇಶದ ಹಿತಾಸಕ್ತಿ, ಐಕ್ಯತೆಯ ಪರ ನಿಲ್ಲಲಿ'
ಚೀನಾ-ಭಾರತ ಗಡಿ ಘರ್ಷಣೆ ವಿಚಾರ ಸಂಬಂಧ ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ರಾಹುಲ್ ಗಾಂಧಿಗೆ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಧೈರ್ಯಶಾಲಿ ಯೋಧನ ತಂದೆ ರಾಹುಲ್ ಗಾಂಧಿಗೆ ಸ್ಪಷ್ಟವಾದ ಸಂದೇಶವನ್ನು ರವಾನಿಸಿದ್ದಾರೆ. ಇಡೀ ದೇಶ ಒಗ್ಗಟ್ಟಾಗಿದೆ. ಆದ್ರೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜಕೀಯ ಸಣ್ಣತನ ಪ್ರದರ್ಶಿಸುತ್ತಿದ್ದಾರೆ. ಅವರು ದೇಶದ ಹಿತಾಸಕ್ತಿ ಮತ್ತು ಐಕ್ಯತೆಯ ಪರ ನಿಲ್ಲಬೇಕು ಎಂದು ಹೇಳಿದ್ದಾರೆ.
ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ ಹಿಂಸಾತ್ಮಕ ಘರ್ಷಣೆಯಲ್ಲಿ 20 ಮಂದಿ ಯೋಧರು ಹುತಾತ್ಮರಾದರೆ ಹಲವರು ಗಾಯಗೊಂಡಿದ್ದರು. ಗಾಯಗೊಂಡ ಯೋಧರೊಬ್ಬರ ತಂದೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೋವನ್ನು ರಾಹುಲ್ ಗಾಂಧಿ ಟ್ವೀಟರ್‌ನಲ್ಲಿ ಹಂಚಿಕೊಂಡು ಮೋದಿ ಸರ್ಕಾರವನ್ನು ಟೀಕಿಸಿದ್ದರು.