ಪಾಟ್ನಾ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಆರ್ಜೆಡಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಅಂತಿಮವಾಗಿದ್ದು, ತೇಜಸ್ವಿ ಯಾದವ್ ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
243 ಕ್ಷೇತ್ರಗಳ ಬಿಹಾರ ಚುನಾವಣೆಯಲ್ಲಿ ಆರ್ಜೆಡಿ, ಸಿಪಿಐ, ಸಿಪಿಎಂ, ಕಾಂಗ್ರೆಸ್ ಹಾಗೂ ವಿಕಾಶೀಲ ಇನ್ಸಾನ್ ಪಾರ್ಟಿ ಒಟ್ಟಿಗೆ ಚುನಾವಣೆ ಎದುರಿಸಲು ಮುಂದಾಗಿದ್ದು, ಆರ್ಜೆಡಿ ಅಭ್ಯರ್ಥಿ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಲಿವೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಅವಿನಾಶ್ ಪಾಂಡೆ, ಮೈತ್ರಿಗೆ ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದಿದ್ದಾರೆ.