ಮುರ್ಷಿದಾಬಾದ್ (ಪಶ್ಚಿಮ ಬಂಗಾಳ):ಲಾರಿಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ರೆಜಿ ನಗರದಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ನಾಲ್ವರ ದುರ್ಮರಣ - ಮುರ್ಷಿದಾಬಾದ್ನಲ್ಲಿ ನಾಲ್ವರ ದುರ್ಮರಣ
ಬೆಳ್ಳಂಬೆಳಗ್ಗೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ಧಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ನಾಲ್ವರ ದುರ್ಮರಣ
ಕಲಿ ನಾರಾಯಣಪುರದಿಂದ ಮುರ್ಷಿದಾಬಾದ್ ಕಡೆಗೆ ಹೊರಟಿದ್ದ 9 ಜನರಿದ್ದ ಕಾರು ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲವಾದ್ದರಿಂದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Last Updated : Jan 5, 2021, 12:49 PM IST