ಬೆಂಗಳೂರು/ನವದೆಹಲಿ: ವೈಜ್ಞಾನಿಕ ಜಾಗೃತಿ ಮೂಡಿಸುವುದು, ರಾಜ್ಯಮಟ್ಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲ ಸೌಕರ್ಯಗಳನ್ನು ಬಲಪಡಿಸುವುದು ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಗಳ ನಿರ್ಣಾಯಕ ಪಾತ್ರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಪ್ರೊ. ಅಶುತೋಷ್ ಶರ್ಮಾ ಒತ್ತಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಆಯೋಜಿಸಿದ್ದ 6ನೇ ವಾರ್ಷಿಕ ಸಭೆ(ವರ್ಚುವಲ್)ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಗಳು ರಾಜ್ಯದ ನಿರ್ದಿಷ್ಟ ಸಮಸ್ಯೆಗಳನ್ನು ಮಾತ್ರ ಬಗೆಹರಿಸುವುದಲ್ಲದೇ, ಪ್ರಾದೇಶಿಕ ನಿರ್ದಿಷ್ಟ ಸಮಸ್ಯೆಗಳನ್ನು ಪರಿಹರಿಸುವಲ್ಲೂ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದ್ದಾರೆ. ಜೂನ್ 18 ರಿಂದ ಜುಲೈ 1ರವರೆಗೆ ಆಯೋಜಿಸಲಾಗಿರುವ ವಾರ್ಷಿಕ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ 29 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ವಿಜ್ಞಾನ ಮತ್ತು ತಂತ್ರಜ್ಞಾನ ಕೌನ್ಸಿಲ್ಗಳ ಅಧಿಕಾರಿಗಳು ಭಾಗವಹಿಸಿದ್ದರು.