ಕರ್ನಾಟಕ

karnataka

ETV Bharat / bharat

ಕೇಂದ್ರದಿಂದ ಪ.ಬಂಗಾಳಕ್ಕೆ ತುರ್ತಾಗಿ 1 ಸಾವಿರ ಕೋಟಿ ಪರಿಹಾರ: ಪ್ರಧಾನಿ ಮೋದಿ - ಕೇಂದ್ರ ಸರ್ಕಾರ

ಅಂಫಾನ್‌ ಚಂಡಮಾರುತದಿಂದ ತತ್ತರಿಸಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ಮೋದಿ ಅವರು 1 ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಹಾನಿಗೀಡಾದ ಜಿಲ್ಲೆಗಳಲ್ಲಿ ಇಂದು ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಈ ಘೋಷಣೆಯನ್ನು ಮಾಡಿದ್ದಾರೆ.

Rs 1000 crore allocated by central government for immediate assistance of West Bengal in the wake of  CycloneAmphan
ಕೇಂದ್ರದಿಂದ ಪ.ಬಂಗಾಳಕ್ಕೆ ತುರ್ತಾಗಿ 1 ಸಾವಿರ ಕೋಟಿ ಪರಿಹಾರ; ಪ್ರಧಾನಿ ಮೋದಿ

By

Published : May 22, 2020, 1:37 PM IST

ಕೋಲ್ಕತ್ತಾ: ಅಂಫಾನ್ ಚಂಡಮಾರುತದಿಂದ ಹಾನಿಗೀಡಾದ ಪಶ್ಚಿಮಬಂಗಾಳದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ 1 ಸಾವಿರ ಕೋಟಿ ರೂಪಾಯಿಗಳ ತುರ್ತು ಪರಿಹಾರ ಘೋಷಿಸಿದ್ದಾರೆ.

ವೈಮಾನಿಕ ಸಮೀಕ್ಷೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಕ್ಲೋನ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಲಕ್ಷ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಕೇಂದ್ರ ನೀಡಲಿದೆ. ಅಂಫಾನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರೊಂದಿಗೆ ಕೇಂದ್ರ ಹಾಗೂ ಬಂಗಾಳ ಸರ್ಕಾರವಿದೆ ಎಂದು ಅಭಯ ನೀಡಿದ್ದಾರೆ.

ಕಳೆದ ವರ್ಷದ ಮೇ ತಿಂಗಳಿನಲ್ಲಿ ದೇಶ ಚುನಾವಣೆಯಲ್ಲಿ ತಲ್ಲೀನವಾಗಿತ್ತು. ಅದೇ ಸಮಯದಲ್ಲಿ ಒಡಿಶಾದಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯ ಕಾರ್ಯಾಚರಣೆಯಲ್ಲಿ ನಿರತರಾಗಿದ್ದೆವು. ವರ್ಷದ ಬಳಿಕ ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಭಾರಿ ಅವಾಂತರವನ್ನೇ ಸೃಷ್ಟಿಸಿದೆ ಎಂದು ಪ್ರಧಾನಿ ಕಂಬನಿ ಮಿಡಿದಿದ್ದಾರೆ.

ವೈಮಾನಿಕ ಸಮೀಕ್ಷೆ ವೇಳೆ ಪ್ರಧಾನಿ ಮೋದಿ ಅವರಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಾಥ್​ ನೀಡಿದ್ರು.

ABOUT THE AUTHOR

...view details