ನಾಗಪುರ (ಮಹಾರಾಷ್ಟ್ರ):ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಸಮಾರಂಭ ನಡೆಯುತ್ತಿರುವ ವೇಳೆ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿಯನ್ನು ಅಲಂಕರಿಸಲಾಗಿದೆ. ಕಚೇರಿಯ ಮುಂಭಾಗ ಭವ್ಯವಾದ ರಂಗೋಲಿಯನ್ನು ರಚಿಸಲಾಗಿದ್ದು, ವರ್ಣರಂಜಿತವಾಗಿದೆ.
ರಾಮಮಂದಿರಕ್ಕೆ ಶಿಲಾನ್ಯಾಸ: ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಅಲಂಕಾರ - ನಾಗಪುರ ಆರ್‌ಎಸ್‌ಎಸ್
ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯನ್ನು ಸಿಂಗರಿಸಲಾಗಿದೆ.
ನಾಗಪುರ ಆರ್‌ಎಸ್‌ಎಸ್ ಕಚೇರಿ
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಎಲ್ಲ ರಾಷ್ಟ್ರೀಯ ಸ್ವಯಂ ಸೇವಕರು ಅಯೋಧ್ಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣದಿಂದಾಗಿ ಅನೇಕ ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಾಗಿದ್ದು, ನಗರದೆಲ್ಲೆಡೆ ಸಂಭ್ರಮ ಮನೆಮಾಡಿದೆ.