ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ಹಾಗೂ ತೀವ್ರ ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಅಸ್ಪತ್ರೆಯಲ್ಲಿ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ ಅವರಿಗೆ ವೆಂಟಿಲೇಟರ್ನಲ್ಲೇ ವೈದ್ಯಕೀಯ ಚಿಕಿತ್ಸೆ ನಡೆಯುತ್ತಿದ್ದು, ಇದೀಗ ಅವರ ಆರೋಗ್ಯದ ಬಗ್ಗೆ ಮಗ ಎಸ್.ಪಿ ಚರಣ್ ಮಾಹಿತಿ ಹಂಚಿಕೊಂಡಿದ್ದಾರೆ.
ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಎಸ್ಪಿಬಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಚರಣ್ ತಿಳಿಸಿದ್ದಾರೆ. ವಿಡಿಯೋ ಶೇರ್ ಮಾಡಿರುವ ಎಸ್ಪಿಬಿ ಮಗ ಚರಣ್, ಸೋಮವಾರದ ವೇಳೆಗೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಮೂಲಕ ತಂದೆಯ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಾಣಿಸಿಕೊಂಡಿರುವ ಮಾಹಿತಿ ನೀಡಿದ್ದಾರೆ.