ಜೈಪುರ/ಚಂಡೀಗಢ:ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರ ಉರುಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಬೆಂಬಲಿತ ಶಾಸಕರು ಹರಿಯಾಣದ ಗುರುಗ್ರಾಮ್ನ ಐಟಿಸಿ ಹೋಟೆಲ್ನಲ್ಲಿ ತಂಗಿದ್ದು, ಮುಂದಿನ ನಡೆ ಬಗ್ಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಗುರುಗ್ರಾಮ್ನ ಮಾನೇಸರ್ನನಲ್ಲಿರುವ ಐಟಿಸಿ ಗ್ರ್ಯಾಂಡ್ ಭಾರತ್ ಹೋಟೆಲ್ನಲ್ಲಿ ಪೈಲಟ್ ಬೆಂಬಲಿತ ಶಾಸಕರು ತಂಗಿರುವುದು ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ತೀವ್ರ ಚರ್ಚೆಯ ವಿಷಯವಾಗಿದೆ. ಮೂಲಗಳ ಪ್ರಕಾರ, ಐಟಿಸಿ ಗ್ರ್ಯಾಂಡ್ ಭಾರತ್ ಹೋಟೆಲ್‌ನೊಳಗೆ 12ಕ್ಕೂ ಹೆಚ್ಚು ಪೈಲಟ್ ಬೆಂಬಲಿತ ಶಾಸಕರು ತಂಗಿದ್ದಾರೆ ಎನ್ನಲಾಗಿದೆ. ಹೋಟೆಲ್ನ ಹೊರಭಾಗದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಗುರುಗ್ರಾಮ್ನ ಐಟಿಸಿ ಗ್ರ್ಯಾಂಡ್ ಹೋಟೆಲ್ ಜೂನ್‌ನಲ್ಲಿ ನಡೆದ ರಾಜ್ಯಸಭೆಯ ಮೂರು ಸ್ಥಾನಗಳ ಚುನಾವಣೆಗೆ ಮುನ್ನ, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಬಿಜೆಪಿ ಮೇಲೆ ಆರೋಪ ಮಾಡಿದ್ದು, ನಮ್ಮ ಕೆಲವು ಶಾಸಕರಿಗೆ ಆಮಿಷ ಒಡ್ಡಿ ಬಿಜೆಪಿ ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ರಾಜಸ್ಥಾನ ವಿಧಾನಸಭೆಯ ಒಟ್ಟು 200 ಶಾಸಕರಲ್ಲಿ ಕಾಂಗ್ರೆಸ್ 107 ಶಾಸಕರು ಮತ್ತು ಬಿಜೆಪಿ 72 ಶಾಸಕರನ್ನು ಹೊಂದಿದೆ. ರಾಜ್ಯದ 13 ಪಕ್ಷೇತರ ಶಾಸಕರಲ್ಲಿ 12 ಜನರ ಬೆಂಬಲವೂ ಕಾಂಗ್ರೆಸ್ ಹೊಂದಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದರು.
2018ರಲ್ಲಿ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದ ಜೊತೆಗೆ ಅಧಿಕಾರದ ಗದ್ದುಗೆಗೆ ಏರಿತ್ತು. ಕಾಂಗ್ರೆಸ್ ಯುವ ನಾಯಕ ಸಚಿನ್ ಪೈಲಟ್ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಅನುಭವಿ ಅಶೋಕ್ ಗೆಹ್ಲೋಟ್ ಅವರಿಗೆ ಸಿಎಂ ಸ್ಥಾನ ನೀಡಿತ್ತು. ಅಲ್ಲದೆ, ಸಚಿನ್ ಪೈಲಟ್ ಅವರನ್ನು ಸಮಾಧಾನಪಡಿಸುವ ಸಲುವಾಗಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿತ್ತು. ಆದರೆ, ಇದರಿಂದ ಮುನಿಸಿಕೊಂಡಿದ್ದ ಸಚಿನ್ ಪೈಲಟ್, ಇದೀಗ ಬಿಜೆಪಿಗೆ ಪಕ್ಷಾಂತರ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.