ನವದೆಹಲಿ:ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ ಜನರ ತ್ಯಾಗವನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದು ಪ್ರಧಾನಿ ಮೋದಿ ಇಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದವರ ತ್ಯಾಗವನ್ನು ಎಂದಿಗೂ ದೇಶ ಮರೆಯಲ್ಲ: ಮೋದಿ - ತುರ್ತು ಪರಿಸ್ಥಿತಿ ಕುರಿತು ಮೋದಿ ಟ್ವೀಟ್
ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45ನೇ ವರ್ಷವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಡಿದವರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ತುರ್ತು ಪರಿಸ್ಥಿತಿಯ 45ನೇ ವರ್ಷಾಚರಣೆ ಸಲುವಾಗಿ ಮೋದಿ ಅವರು ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
45 ವರ್ಷಗಳ ಹಿಂದೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಅಂದು ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ ಮತ್ತು ಚಿತ್ರಹಿಂಸೆ ಎದುರಿಸಿದ ಜನರಿಗೆ ನಾನು ವಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.