ನವದೆಹಲಿ: ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಚೀನಾ ಜೊತೆಗಿನ ಉದ್ವಿಗ್ನತೆಯ ನಡುವೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ಮತ್ತೆ ಪ್ರಧಾನಿ ಮೋದಿ ಅವರನ್ನು ತಿವಿದಿದ್ದು, ಚೀನಾ, ಭಾರತದ ಭೂಪ್ರದೇಶಕ್ಕೆ ನುಸುಳಿದೆ ಎಂದು ಉಪಗ್ರಹ ಚಿತ್ರಗಳು ತೋರಿಸುತ್ತವೆ ಎಂದಿದ್ದಾರೆ.
ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಯಾರೂ ಒಳನುಗ್ಗಿಲ್ಲ, ನಮ್ಮ ಭೂಪ್ರದೇಶವನ್ನು ಯಾರೂ ಆಕ್ರಮಿಸಿಕೊಂಡಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಪ್ಯಾಂಗೊಂಗ್ ಸರೋವರದ ಬಳಿಯ ಚೀನಾ ಭಾರತ ಮಾತೆಯ ಪವಿತ್ರ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಉಪಗ್ರಹ ಚಿತ್ರಗಳು ಸ್ಪಷ್ಟವಾಗಿ ತೋರಿಸುತ್ತವೆ' ಎಂದಿದ್ದಾರೆ.