ನವದೆಹಲಿ:ಕೊರೊನಾ ವೈರಸ್‌ನಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸಚಿವಾಲಯಗಳು ಮತ್ತು ಎಲ್ಲಾ ರಾಜ್ಯಗಳಲ್ಲೂ ಈ ಬಗ್ಗೆ ಎಲ್ಲಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕ್ರಮಗಳನ್ನು ಪೂರ್ವಭಾವಿಯಾಗಿ ತೆಗೆದುಕೊಳ್ಳಲಾಗಿದೆ. ವೀಸಾ ನಿರಾಕರಿಸುವುದರಿಂದ ಹಿಡಿದು ಆರೋಗ್ಯ ಸಾಮರ್ಥ್ಯಗಳನ್ನು ಹೆಚ್ಚಿಸುವವರೆಗೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.