ನವದೆಹಲಿ :ಬ್ಯಾಂಕುಗಳಿಂದ 9 ಸಾವಿರ ಕೋಟಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಪ್ರಕರಣವನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 8ಕ್ಕೆ ಮುಂದೂಡಿದೆ.
ವಿಜಯ್ ಮಲ್ಯಗೆ ಸೇರಿದ ಕಂಪನಿಗಳನ್ನು ಮುಚ್ಚುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಲ್ಯ ಒಡೆತನದ ಯುನೈಟೆಡ್ ಬ್ರಿವರೈಸ್ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಇತರೆ ಅರ್ಜಿ ಸೇರಿ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.