ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ಅರ್ಜಿಯ ಸಂಬಂಧ ಅಪರಾಧಿಗಳು ತಮ್ಮ ಪ್ರತಿಕ್ರಿಯೆಯನ್ನು ಕೋರ್ಟ್‌ಗೆ ಸಲ್ಲಿಸಿದ ನಂತರವಷ್ಟೇ ವಿಚಾರಣೆ ಮುಂದುವರೆಯಲಿದೆ.
ನಿರ್ಭಯಾ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ವಿಚಾರ: ಅರ್ಜಿ ವಿಚಾರಣೆ ಮುಂದೂಡಿಕೆ - ಅಪರಾಧಿ ಪವನ್ ಕುಮಾರ್ ಗುಪ್ತಾ
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಸುಪ್ರೀಂಕೋರ್ಟ್
ಅಪರಾಧಿ ಪವನ್ ಕುಮಾರ್ ಗುಪ್ತಾ ವಿಚಾರವಾಗಿ ನಿಷ್ಪಕ್ಷಪಾತ ಸಲಹೆ ನೀಡಲು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಅವರನ್ನು ಆ್ಯಮಿಕಸ್ ಕ್ಯೂರಿಯಾಗಿ ಕೋರ್ಟ್ ನೇಮಿಸಿದೆ. ನ್ಯಾಯಮೂರ್ತಿಗಳಾದ ಆರ್. ಬಾನುಮತಿ, ಅಶೋಕ್ ಭೂಷಣ್ ಮತ್ತು ಎ. ಎಸ್. ಬೋಪಣ್ಣ ಅವರ ನ್ಯಾಯಪೀಠವು ಈ ನಿರ್ಧಾರ ಪ್ರಕಟಿಸಿತು.
ನಾಳೆ ಮಧ್ಯಾಹ್ನ ಎರಡು ಗಂಟೆಗೆ ವಿಚಾರಣೆ ಮುಂದುವರೆಯುವುದು ಎಂದು ನ್ಯಾಯಾಲಯ ತಿಳಿಸಿದೆ.