ಕರ್ನಾಟಕ

karnataka

ETV Bharat / bharat

ಶಬರಿಮಲೆ ವಿವಾದ: ವಿಸ್ತೃತ ಪೀಠಕ್ಕೆ ಮರುಪರಿಶೀಲನಾ ಅರ್ಜಿ ವರ್ಗಾಯಿಸಿದ ಸುಪ್ರೀಂಕೋರ್ಟ್‌

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಕಳೆದ ವರ್ಷ ಸಿಜೆಐ ದೀಪಕ್​ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಈ ತೀರ್ಪಿನ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆಯಾಗಿ ಪರ-ವಿರೋಧದ ಮಾತುಗಳು ಕೇಳಿ ಬಂದಿದ್ದವು. ಈ ತೀರ್ಪಿನ ಮರು ಪರಿಶೀಲನೆ ನಡೆಸಬೇಕು ಎಂದು ಬಂದಿರುವ ಅರ್ಜಿಗಳ ವಿಚಾರಣೆಯ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

By

Published : Nov 14, 2019, 10:54 AM IST

Updated : Nov 14, 2019, 11:53 AM IST

ಮರುಪರಿಶೀಲನಾ ಅರ್ಜಿ ವರ್ಗಾಯಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕು ಎನ್ನುವ ಸುಪ್ರೀಂತೀರ್ಪಿನ ಮರುಪರಿಶೀಲನೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಪೂಜಾ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕೇವಲ ಹಿಂದೂಗಳ ದೇವಾಲಯಕ್ಕಷ್ಟೇ ಸೀಮಿತವಾಗಿಲ್ಲ. ಇದು ಎಲ್ಲಾ ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೂ ಅನ್ವಯಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.​ ಅಲ್ಲದೇ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಕೋರ್ಟ್​, ಅರ್ಜಿಯನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದೆ.

3: 2 ರ ಬಹುಮತದಿಂದ ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಭಿನ್ನಮತದ ತೀರ್ಪು ನೀಡಿದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು 2018ರಲ್ಲಿ ಸಿಜೆಐ ದೀಪಕ್​ ಮಿಶ್ರಾ ಅವರ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಈ ತೀರ್ಪಿನ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆಯಾಗಿ ಪರ-ವಿರೋಧಗಳು ವ್ಯಕ್ತವಾಗಿದ್ದವು. ಹೀಗಾಗಿ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್​ಗೆ 56 ಅರ್ಜಿಗಳು ಸಲ್ಲಿಕೆಯಾಗಿದ್ದವು.

Last Updated : Nov 14, 2019, 11:53 AM IST

ABOUT THE AUTHOR

...view details