ಕರ್ನಾಟಕ

karnataka

ETV Bharat / bharat

ಕೊರೊನಾಗೆ ಉಚಿತ ಚಿಕಿತ್ಸೆ ನೀಡುವ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು: ಸುಪ್ರೀಂಕೋರ್ಟ್​ - ಕೊರೊನಾಗೆ ಉಚಿತ ಚಿಕಿತ್ಸೆ ನೀಡುವ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು

ಕೊರೊನಾ ಸೋಂಕಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರವೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

plea seeking free test, treatment for coronavirus infection
ಕೊರೊನಾಗೆ ಉಚಿತ ಚಿಕಿತ್ಸೆ ನೀಡುವ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು

By

Published : Apr 21, 2020, 3:26 PM IST

ನವದೆಹಲಿ:ಕೋವಿಡ್-19 ಸಾಂಕ್ರಾಮಿಕ ರೋಗವು ಇರುವವರೆಗೂ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೇಂದ್ರ, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಈ ಬಗ್ಗೆ ಅರ್ಜಿ ಸಲ್ಲಿಸಿದ್ದ ದೆಹಲಿ ಮೂಲದ ವಕೀಲ ಅಮಿತ್ ದ್ವಿವೇದಿ, ಭಾರತೀಯ ನಾಗರಿಕರಿಗೆ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಪರೀಕ್ಷೆಗಳು, ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಕೇಂದ್ರ, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ 'ನಮ್ಮ ಬಳಿ ಯಾವುದೇ ಫಂಡ್ ಇಲ್ಲ, ಯಾರಿಗೆ ಉಚಿತ ಚಿಕಿತ್ಸೆ ನೀಡಬೇಕೆಂಬ ಬಗ್ಗೆ ಸರ್ಕಾರ ನಿರ್ಧರಿಸಬೇಕು' ಎಂದಿದೆ.

ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಬಿ.ಆರ್. ಗವಾಯಿ ಅವರನ್ನು ಒಳಗೊಂಡ ನ್ಯಾಯಪೀಠ, ಪ್ರಚಾರದ ಹಿತಾಸಕ್ತಿಗೆ ಮೊಕದ್ದಮೆ ಹೂಡಬೇಡಿ ಎಂದು ಹೇಳಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ವಿಷಯವನ್ನು ಆಲಿಸಿದ ನ್ಯಾಯಪೀಠ, ನ್ಯಾಯಾಲಯ ಗಮನಿಸಿದಂತೆ ದೇಶಾದ್ಯಂತದ ಸರ್ಕಾರಿ ಆಸ್ಪತ್ರೆಗಳು ಕೊರೊನಾ ಸೋಂಕಿತ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿವೆ'. ಎಂದು ಹೇಳಿ ಅರ್ಜಿಯನ್ನು ವಜಾ ಗೊಳಿಸಿವೆ.

ABOUT THE AUTHOR

...view details