ನವದೆಹಲಿ:ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ದೆಹಲಿ ನಿವಾಸಿಗಳಾದ ವಿಕ್ರಮ್ ಗೆಹ್ಲೋಟ್, ರಿಷಬ್ ಜೈನ್ ಮತ್ತು ಗೌತಮ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ವಜಾಗೊಳಿಸಿದೆ.
"ಓರ್ವ ನಾಗರಿಕನಾಗಿ ರಾಷ್ಟ್ರಪತಿಯನ್ನು ಭೇಟಿಯಾಗಲು ನಿಮಗೆ ಸ್ವಾತಂತ್ರ್ಯವಿದೆ. ಕೋರ್ಟ್ಗೆ ಬರಬೇಡಿ. ಬಾಲಿವುಡ್ ನಟ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಸಂವಿಧಾನವನ್ನು ಅನುಸರಿಸುತ್ತಿಲ್ಲ ಎಂದು ನೀವು ಹೇಳುತ್ತೀರಿ. ಆದರೆ ಮಹಾರಾಷ್ಟ್ರ ಎಷ್ಟು ದೊಡ್ಡದಾಗಿದೆ ಎಂದು ತಿಳಿದಿದೆಯೇ? ನಾವು ಇಂತಹ ಕೇಸುಗಳನ್ನು ಉತ್ತೇಜಿಸುವುದಿಲ್ಲ. ಅರ್ಜಿ ವಜಾಗೊಳಿಸಲಾಗಿದೆ" ಎಂದು ನ್ಯಾಯಪೀಠ ತಿಳಿಸಿದೆ.