ನವದೆಹಲಿ:ವಿವಿಧ ರಾಜ್ಯಗಳಲ್ಲಿ ಉಳಿದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಲು ಕೇಂದ್ರ ಸರ್ಕಾರ ಯಾವುದೇ ರೀತಿಯ ಹಣ ಪಡೆದುಕೊಳ್ಳಬಾರದು ಎಂದು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಂಡಿದೆ.
ವಲಸೆ ಕಾರ್ಮಿಕರು ತವರು ರಾಜ್ಯಗಳಿಗೆ ತೆರಳಲು ರೈಲು ಟಿಕೆಟ್ ಪಡೆದುಕೊಳ್ಳಲು ಹಣ ವಸೂಲಿ ಮಾಡಬಾರದು. ಅವರು ತವರು ನಾಡಿಗೆ ತೆರಳಲು ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನೂ ಕೇಂದ್ರ ಸರ್ಕಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಜಗದೀಪ್ ಚಾಕ್ಕೂರ್ ಎಂಬುವವರು ಅರ್ಜಿ ಸಲ್ಲಿಸಿದ್ದು, ಇದರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು.