ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ವಕೀಲ ಪ್ರಶಾಂತ್ ಭೂಷಣ್ಗೆ ಒಂದು ರೂ. ದಂಡ ವಿಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಸುಪ್ರೀಂಕೋರ್ಟ್ ನಡೆಸಿದ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್ ದೋಷಿ ಎಂಬುದು ಸಾಬೀತಾಗಿತ್ತು. ತಮ್ಮ ತಪ್ಪಿಗೆ ಕ್ಷಮೆ ಕೇಳುವಂತೆ ನ್ಯಾಯಾಲಯ ಸೂಚಿಸಿ, ಕಾಲಾವಕಾಶ ನೀಡಿತ್ತು. ಆದರೆ ಕ್ಷಮೆಯಾಚನೆ ಮಾಡುವುದಕ್ಕೆ ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು.