ಕರ್ನಾಟಕ

karnataka

ETV Bharat / bharat

ಮೀಸಲಾತಿ ಕುರಿತ ಸುಪ್ರೀಂ ತೀರ್ಪಿನ ಬಗ್ಗೆ ಕೇಂದ್ರದ ಸ್ಪಷ್ಟನೆ.. ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಮರ! - ಸರ್ಕಾರದ ಪಾತ್ರ ಇಲ್ಲ ಎಂದು ಕೇಂದ್ರ ಸ್ಪಷ್ಟನೆ

ರಾಜ್ಯಸಭೆಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್ ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸಿ ರಾಜ್ಯಸಭೆ ಕಲಾಪ ಬಹಿಷ್ಕರಿಸಿದ್ದಾರೆ..

SC order on reservation,ಮೀಸಲಾತಿ ಕುರಿತು ಸುಪ್ರೀಂ ತೀರ್ಪು ವಿಚಾರ
ಥಾವರ್‌ಚಂದ್ ಗೆಹ್ಲೋಟ್

By

Published : Feb 10, 2020, 9:10 PM IST

ನವದೆಹಲಿ:ಉದ್ಯೋಗ ನೇಮಕಾತಿ ವೇಳೆ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಪಕ್ಷ ಕಾರ್ಯಾಚರಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದೆ.

ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್, ಈ ವಿಷಯದ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರವನ್ನು ಸಹ ಕೇಳಿಲ್ಲ. 2012ರಲ್ಲಿ ಉತ್ತರಾಖಂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್. ಆಗ ಆ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಪ್ರತಿಯಾಗಿ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ ಎಂದರು.

ಈ ವಿಷಯವನ್ನು ಸರ್ಕಾರದ "ಉನ್ನತ ಮಟ್ಟದಲ್ಲಿ" ಚರ್ಚಿಸಲಾಗುತ್ತಿದೆ ಮತ್ತು ಈ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುಲಾಗುತ್ತೆ. ಎಸ್‌ಸಿ-ಎಸ್ಟಿ ಮತ್ತು ಶೋಷಿತ ವರ್ಗಗಳ ಹಿತವನ್ನ ನಮ್ಮ ಸರ್ಕಾರ ಯಾವಾಗಲೂ ಕಾಪಾಡುತ್ತೆ ಅಂತಾ ಸಚಿವರು ಹೇಳಿದರು.

ಸಚಿವರ ಈ ಹೇಳಿಕೆ ಖಂಡಿಸಿದ ಕಾಂಗ್ರೆಸ್ ಪಕ್ಷದ ಸದಸ್ಯರು, ಸದನದಿಂದ ಹೊರ ನಡೆದರು. ಇದೇ ವಿಚಾರ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, 2012ರಲ್ಲಿ ಉತ್ತರಾಖಂಡ ಸರ್ಕಾರದಿಂದಾಗಿ ಈ ಪರಿಸ್ಥಿತಿ ಬಂದಿದೆ ಎಂದು ಸಚಿವರೊಬ್ಬರು ಸದನದ ದಾರಿತಪ್ಪಿಸಿದ್ದಾರೆ. ನಾವು ಖಂಡಿತವಾಗಿಯೂ ಸಚಿವರ ವಿರುದ್ಧ ನಿಲುವಳಿ ಸೂಚನೆ ಮಂಡಿಸುತ್ತೇವೆ ಎಂದಿದ್ದಾರೆ.

ABOUT THE AUTHOR

...view details