ನವದೆಹಲಿ:ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ಸ್ಥಾಪಿಸುವ ಕುರಿತು ಎಪಿ ಹೈಕೋರ್ಟ್ ನೀಡಿದ ಯಥಾಸ್ಥಿತಿ ಆದೇಶವನ್ನ ರದ್ದುಗೊಳಿಸುವಂತೆ ಕೋರಿ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ ಮತ್ತು ಎಂ.ಆರ್ ಶಾ ಅವರಿದ್ದ ಪೀಠ ಅರ್ಜಿ ತಿರಸ್ಕರಿಸಿದೆ.
ಮೂರು ರಾಜಧಾನಿಗಳ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶಗಳ ವಿರುದ್ಧ ಆಂಧ್ರ ಸರ್ಕಾರ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ, ಮೂರು ರಾಜಧಾನಿಗಳ ವಿಷಯದಲ್ಲಿ ಎಲ್ಲ ಕೆಲಸಗಳನ್ನು ನಿಲ್ಲಿಸಬೇಕು ಎಂದು ತಿಳಿಸಿ ಅರ್ಜಿ ತಿರಸ್ಕಾರ ಮಾಡಿದೆ.
ಆಡಳಿತ ವಿಕೇಂದ್ರೀಕರಣ - ಸಿಆರ್‌ಡಿಎ ಕಾಯ್ದೆ ರದ್ದುಗೊಳಿಸುವ ಕುರಿತು ಎಪಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಗಳನ್ನು ಆಗಸ್ಟ್ 4 ರಂದು ರಾಜ್ಯ ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡವಾಳ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಟೇ ಆರ್ಡರ್ ತೆಗೆದು ಹಾಕುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಈ ಅರ್ಜಿಯನ್ನು ತಿರಸ್ಕರಿಸಿದೆ.