ನವದೆಹಲಿ:ಸೆಪ್ಟೆಂಬರ್ 13ರಿಂದ ನಡೆಯಲಿರುವ ರಾಷ್ಟ್ರೀಯ ಅರ್ಹತೆ ಕಂ ಪ್ರವೇಶ ಪರೀಕ್ಷೆ (ನೀಟ್) ರದ್ದು ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನೀಟ್ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಿರಾಕರಿಸಿದ ಸುಪ್ರೀಂ - ಸುಪ್ರೀಂಕೋರ್ಟ್
ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಸೆಪ್ಟೆಂಬರ್ 13ರಿಂದ ನಡೆಯುವ ಪರೀಕ್ಷೆಗೆ ಸಂಬಂಧಪಟ್ಟ ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೋರ್ಟ್ ಹೇಳಿದೆ.

ನೀಟ್ ರದ್ದು ಕೋರಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್
ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರಿದ್ದ ಏಕಸದಸ್ಯ ಪೀಠ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ಕುರಿತು ಸಂಬಂಧಪಟ್ಟ ಪ್ರಾಧಿಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ನಾವು ಪರೀಕ್ಷೆ ಮುಂದೂಡಿಕೆಗೆ ಒಲವು ತೋರುವುದಿಲ್ಲ ಎಂದು ಪೀಠ ಹೇಳಿದೆ. ಸೆಪ್ಟೆಂಬರ್ 4ರಂದು ಬಿಜೆಪಿಯೇತರ 6 ರಾಜ್ಯಗಳ ಸಚಿವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ಕೋರ್ಟ್ ರದ್ದು ಮಾಡಿತ್ತು. ಆಗಸ್ಟ್ 17ರ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಕೋರಿದ್ದರು.