ನವದೆಹಲಿ: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರ ಸರ್ಕಾರ ವಿಧಿಸಲಾದ ಎಲ್ಲ ನಿರ್ಬಂಧಗಳನ್ನು ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್, ತಕ್ಷಣವೇ ನಿರ್ದೇಶನ ನೀಡಲು ನಿರಾಕರಿಸಿದೆ.
ಕಾಶ್ಮೀರ ಪರಿಸ್ಥಿತಿ ಸದ್ಯ ಸೂಕ್ಷ್ಮವಾಗಿದೆ ಸರ್ಕಾರಕ್ಕೆ ಸ್ವಲ್ಪ ಟೈಮ್ ಕೊಡಿ: ಸುಪ್ರೀಂ - ಕಾಂಗ್ರೆಸ್ ಕಾರ್ಯಕರ್ತ ತೆಹ್ಸೀನ್ ಪೂನವಾಲ್ಲಾ
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರ ಸರ್ಕಾರ ವಿಧಿಸಲಾದ ಎಲ್ಲ ನಿರ್ಬಂಧಗಳನ್ನು ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್, ತಕ್ಷಣವೇ ನಿರ್ದೇಶನ ನೀಡಲು ನಿರಾಕರಿಸಿದೆ.
370 ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧಗಳು ಮತ್ತು ಇತರ ಹಿಂಜರಿತ ಕ್ರಮಗಳನ್ನು ವಿಧಿಸಿರುವ ಕೇಂದ್ರದ ನಿರ್ಧಾರದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ತೆಹ್ಸೀನ್ ಪೂನವಾಲ್ಲಾ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ನಡೆಸಿತು.
ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಅಜಯ್ ರಸ್ತೋಗಿ ಅವರನ್ನು ಒಳಗೊಂಡ ನ್ಯಾಯಪೀಠ, ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಹಳ ಸೂಕ್ಷ್ಮವಾಗಿದೆ. ಅದು ಸಾಮಾನ್ಯ ಸ್ಥಿತಿಗೆ ಬರಲು ಸ್ವಲ್ಪ ಸಮಯವನ್ನು ನೀಡಬೇಕು ಎಂದು ಹೇಳಿದರು. ಅಲ್ಲದೆ ಅಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಪೀಠ ಆದೇಶಿಸಿದೆ.