ನವದೆಹಲಿ:2018 ರಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ನೀಡಿದೆ. ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ನಾಯಕರೊಬ್ಬರು ಸಲ್ಲಿಸಿರುವ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ನೋಟಿಸ್ - PIL seeking a CBI probe into Dulal's alleged murder
2018 ರಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ವಕ್ತಾರ ಹಾಗೂ ಹಿರಿಯ ವಕೀಲ ಗೌರವ್ ಭಾಟಿಯಾ ಸಲ್ಲಿಸಿದ್ದ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
![ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ನೋಟಿಸ್ SC seeks WB reply on BJP leader's plea for making him party in case of party worker's death](https://etvbharatimages.akamaized.net/etvbharat/prod-images/768-512-5858283-thumbnail-3x2-megha.jpg)
2018 ರಲ್ಲಿ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಮ್‍ಪುರ ಗ್ರಾಮದ ಬಳಿ ನೇಣು ಬಿಗಿದ ಸ್ಥೀತಿಯಲ್ಲಿ ದುಲಾಲ್ ಕುಮಾರ್ (32) ಎಂಬ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಪಶ್ಚಿಮ ಬಂಗಾಳದ ಬಿಜೆಪಿ ವಕ್ತಾರ ಹಾಗೂ ಹಿರಿಯ ವಕೀಲ ಗೌರವ್ ಭಾಟಿಯಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು. ಅಲ್ಲದೇ ಅರ್ಜಿಯಲ್ಲಿ ಕಾರ್ಯಕರ್ತನ ಹತ್ಯೆ ನಡೆದು 20 ದಿನಗಳಾದರೂ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ, ಶವದ ಮರಣೋತ್ತರ ಪರೀಕ್ಷೆ ನಡೆಸಿರಲಿಲ್ಲ. ಹತ್ಯೆಯ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡ ಇದೆ ಎಂದು ಆರೋಪಿಸಲಾಗಿತ್ತು.
ಈ ಕುರಿತು ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹಾಗೂ ನ್ಯಾ. ಬಿ ಆರ್ ಗವಾಯಿ ಮತ್ತು ನ್ಯಾ.ಸೂರ್ಯ ಕಾಂತ್ ಅವರಿದ್ದ ನ್ಯಾಯಪೀಠವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗೌರವ್ ಭಾಟಿಯಾ ಅವರಿಗೆ ವಾದ ಮಂಡಿಸಲು ಅವಕಾಶ ನೀಡುವ ಕುರಿತು ಪ್ರತಿಕ್ರಿಯೆ ನೀಡುವಂತೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.