ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧಿಸಿದಂತೆ ತೀರ್ಪನ್ನು ಆಗಸ್ಟ್ 31ರೊಳಗೆ ನೀಡುವಂತೆ ಸುಪ್ರೀಂಕೋರ್ಟ್ ಲಖನೌದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
ಬಾಬರಿ ಮಸೀದಿ ತೀರ್ಪನ್ನು ಆಗಸ್ಟ್ 31ರೊಳಗೆ ನೀಡಿ: ಸಿಬಿಐ ಕೋರ್ಟ್ಗೆ ಸುಪ್ರೀಂ ಡೆಡ್ಲೈನ್
ಸುಪ್ರೀಂ
16:53 May 08
ಈ ಪ್ರಕರಣದ ತನಿಖೆ ಮುಕ್ತಾಯಗೊಳಿಸಿದ ನಂತರ ಸಿಬಿಐ 40 ಆರೋಪಿಗಳ ವಿರುದ್ಧ 1993 ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತ್ತು. ಈ ಆರೋಪಿಗಳ ಪೈಕಿ 17 ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ.
ಈ ಪ್ರಕರಣದ ಆರೋಪಿಗಳಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದ್ದಾರೆ.
1992 ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ಪ್ರಕರಣ ನಡೆದಿತ್ತು.
Last Updated : May 8, 2020, 8:48 PM IST