ನವದೆಹಲಿ: ದೆಹಲಿ ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ತೀರ್ಮಾನಿಸಿರುವ ಎಎಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛಾಟಿ ಬೀಸಿದೆ.
ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ಸೌಲಭ್ಯ..ಎಎಪಿ ಸರ್ಕಾರಕ್ಕೆ ಸುಪ್ರೀಂ ಛಾಟಿ! - ಸುಪ್ರೀಂಕೋರ್ಟ್
ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಎಎಪಿ ಸರ್ಕಾರದ ಪ್ರಸ್ತಾವನೆಗೆ ಸುಪ್ರೀಂಕೋರ್ಟ್ ಛಾಟಿ ಬೀಸಿದೆ.
ಎಎಪಿ ಸರ್ಕಾರದ ನಿರ್ಧಾರವನ್ನ ಆಕ್ಷೇಪಿಸಿ ಸುಪ್ರೀಂಕೋರ್ಟ್ಗೆ ಮೆಹ್ತಾ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಎಎಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಇತರ ರಾಜ್ಯಗಳು ಕೂಡ ಉಚಿತ ಸೌಲಭ್ಯಗಳನ್ನ ನೀಡುವಾಗ ಸ್ವಲ್ಪ ಯೋಚನೆ ಮಾಡಬೇಕು ಎಂದಿದೆ.
ಸಾಮಾನ್ಯ ಜನರ ತೆರಿಗೆ ಹಣ ವೆಚ್ಚಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಇಂಥಾ ಉಚಿತ ಸೌಲಭ್ಯಗಳು ದೆಹಲಿ ಮೆಟ್ರೋಗೆ ನಷ್ಟ ಉಂಟುಮಾಡುವುದಿಲ್ಲವೆ ಎಂದು ಪ್ರಶ್ನೆ ಮಾಡಿದೆ. ಇದೇ ವೇಳೆ, ನಾಲ್ಕನೇ ಹಂತದ ಮೆಟ್ರೋ ಕಾಮಗಾರಿಗೆ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರಕ್ಕೂ ಛಾಟಿ ಬೀಸಿದೆ. ಕೂಡಲೆ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದೆ.