ನವದೆಹಲಿ:ಇಂದಿಗೆ ಮುಂದೂಡಲ್ಪಟ್ಟಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಗಿದೆ.
ವಾದ ಮಂಡನೆ ಮಾಡುತ್ತಿರುವ ವಕೀಲ ಸಜನ್ ಪೂವಯ್ಯ, ಶಾಸಕರ ಅನರ್ಹತೆ ಮುಟ್ಟುವ ಗೋಜಿಗೆ ಅಗತ್ಯವಿಲ್ಲ ಬದಲಾಗಿ ಶಾಸಕರ ರಾಜೀನಾಮೆಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಮತ್ತೋರ್ವ ಅನರ್ಹ ಶಾಸಕರ ಪರ ವಾದ ಮಂಡಿಸುತ್ತಿರುವ ವಕೀಲ ವಿ.ಗಿರಿ ಸದ್ಯ ವಾದ ಮಂಡಿಸುತ್ತಿದ್ದಾರೆ.
ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರ ಆರಂಭಿಸಿತ್ತು. ಬುಧವಾರ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇಂದಿಗೆ ವಿಚಾರಣೆ ಮುಂದೂಡಿತ್ತು.
ರಾಜ್ಯದಲ್ಲಿ ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಉಪಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನಡೆಸುತ್ತಿರುವ ವಿಚಾರಣೆ ಹೆಚ್ಚಿನ ಮಹತ್ವ ಪಡೆದಿದೆ.
ಅಯೋಧ್ಯೆ ಪ್ರಕರಣದ ವಿಚಾರಣೆಯಿಂದಾಗಿ ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಈಗ ಅಯೋಧ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದರಿಂದ ಅನರ್ಹ ಶಾಸಕರ ಅರ್ಜಿಯನ್ನು ಕೈಗೆತ್ತಿಕೊಂಡಿದೆ.