ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಅಲ್ಲದೆ ಈ ಬಾರಿಯ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್. ವಿಶ್ವನಾಥ್ ತಿಳಿಸಿದರು. ಮುಂದಿನ ಚುನಾವಣೆಯಲ್ಲಿ ಜನ ನಮ್ಮನ್ನು ಸ್ವೀಕರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅನರ್ಹರ ಕುರಿತ ಸ್ಪೀಕರ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್! ಚುನಾವಣೆ ಸ್ಪರ್ಧೆಗೆ ಅವಕಾಶ
12:30 November 13
ಉಪಚುನಾವಣೆಯಲ್ಲಿ ಸ್ಪರ್ಧಿಸುವೆ.... ಹೆಚ್. ವಿಶ್ವನಾಥ್
12:28 November 13
ರಾಷ್ಟ್ರದ ಸಾಂವಿಧಾನಿಕ ನೈತಿಕತೆಯನ್ನು ಎತ್ತಿಹಿಡಿಯಬೇಕಾಗಿದೆ: ಅಶ್ವನಿ ಕುಮಾರ್
ಸುಪ್ರೀಂ ಏನು ತೀರ್ಪು ನೀಡುತ್ತದೋ ಅದು ಅಂತಿಮ. ಈ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ. ಉನ್ನತ ನ್ಯಾಯಾಲಯ ನೀಡಿದ ತೀರ್ಪನ್ನು ಗೌರವಿಸಬೇಕು. ಸುಪ್ರೀಂ ಕೋರ್ಟ್ ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಮಾತನಾಡಿದೆ. ನಮ್ಮದು ಜನಪ್ರಿಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಸಾಂವಿಧಾನಿಕ ಪ್ರಜಾಪ್ರಭುತ್ವವೂ ಆಗಿರುವುದರಿಂದ ರಾಷ್ಟ್ರದ ಸಾಂವಿಧಾನಿಕ ನೈತಿಕತೆಯನ್ನು ಎತ್ತಿಹಿಡಿಯಬೇಕು. ಈ ತೀರ್ಪನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಹೇಳಿದ್ದಾರೆ.
10:49 November 13
ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದ ನ್ಯಾಯಾಲಯ
- 2023ರವರೆಗೆ ಅವರ ಅನರ್ಹತೆಗೆ ಅವಕಾಶವಿಲ್ಲ
- ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದ ನ್ಯಾಯಾಲಯ
- ನ್ಯಾಯಮೂರ್ತಿ. ಎನ್ ವಿ ರಮಣ, ಸಂಜೀವ್ ಖನ್ನಾ ಹಾಗೂ ಕೃಷ್ಣ ಮುರಾರಿ ಇರುವ ತ್ರಿಸದಸ್ಯ ಪೀಠದಿಂದ ತೀರ್ಪು ಪ್ರಕಟ
10:44 November 13
ಸ್ಪೀಕರ್ ಆದೇಶವನ್ನು ಎತ್ತಿಹಿಡಿದ ನ್ಯಾಯಾಲಯ
- ಅರ್ಜಿದಾರರು ರಾಜೀನಾಮೆಗೆ ಬಯಸಿದ್ದಾರೆಂಬುದು ಸ್ಪಷ್ಟವಾದ ಬಳಿಕ ಸ್ಪೀಕರ್ ರಾಜೀನಾಮೆ ಅಂಗೀಕರಿಸಬಹುದು
- ಸ್ಪೀಕರ್ ಆದೇಶವನ್ನು ಎತ್ತಿಹಿಡಿದ ನ್ಯಾಯಾಲಯ
- ಆದರೆ ಸದನದ ಸಂಪೂರ್ಣ ಕಾಲಾವಧಿವರೆಗೆ ಅನರ್ಹಗೊಳಿಸುವ ಹಕ್ಕು ಸ್ಪೀಕರ್ಗಿಲ್ಲ
- ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದ ಕೋರ್ಟ್
10:43 November 13
ಕೋರ್ಟ್ ಅಸಮಾಧಾನ
- ಸ್ಪೀಕರ್ ಆದೇಶವನ್ನು ಪ್ರಶ್ನಿಸುವ ಶಾಸಕರು ಮೊದಲು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬಹುದಿತ್ತು.
10:39 November 13
- ಅರ್ಜಿದಾರರು ನ್ಯಾಯಾಲಯ ಮೆಟ್ಟಿಲೇರಿರುವ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ
10:38 November 13
ತೀರ್ಪು ಓದುತ್ತಿರುವ ನ್ಯಾಯಾಧೀಶರು
- ತೀರ್ಪು ಓದುತ್ತಿರುವ ನ್ಯಾಯಾಧೀಶರು
09:56 November 13
ಏನಾಗಲಿದೆ ಅನರ್ಹರ ಹಣೆಬರಹ?
ನವದೆಹಲಿ:ರಾಜ್ಯ ರಾಜಕಾರಣಕ್ಕೆ ಮಹತ್ವದ ತಿರುವು ನೀಡಲಿರುವ ಅನರ್ಹ ಶಾಸಕರ ಭವಿಷ್ಯ ಇಂದು ಪ್ರಕಟವಾಗಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡಿದ್ದ 17 ಶಾಸಕರ ಕುರಿತಾದ ಮಹತ್ವದ ತೀರ್ಪನ್ನು ಇಂದು ಸರ್ವೋಚ್ಛ ನ್ಯಾಯಾಲಯ ಪ್ರಕಟಿಸಲಿದೆ.
ಕಾಂಗ್ರೆಸ್ನ 13, ಜೆಡಿಎಸ್ನ 3 ಹಾಗೂ ಓರ್ವ ಪಕ್ಷೇತರ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂಖ್ಯಾಬಲದ ಕೊರತೆಯಿಂದ ಅನಿವಾರ್ಯವಾಗಿ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಕುಮಾರಸ್ವಾಮಿ ನಾಯಕತ್ವದ ಮೈತ್ರಿ ಸರ್ಕಾರ ಪತನಗೊಂಡಿತ್ತು. ಬಳಿಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಿತು.
ಈ ಎಲ್ಲಾ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದಾರೆ ಎಂದು ಅಂದಿನ ವಿಧಾನ ಸಭಾ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಈ ಎಲ್ಲಾ ಶಾಸಕರನ್ನೂ ಅನರ್ಹಗೊಳಿಸಿದ್ದರು. ಆದರೆ ತಮ್ಮ ಅನರ್ಹತೆ ಪ್ರಶ್ನಿಸಿ ಈ ಎಲ್ಲಾ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ರಮಣ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.