ನವದೆಹಲಿ:2018 ರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಮುಂಬೈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ತನ್ನ ಬಂಧನವು 'ಕಾನೂನುಬಾಹಿರ'ವಾಗಿದ್ದು, 1950ರ ಭಾರತದ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿರುವ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗೋಸ್ವಾಮಿ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.